For the best experience, open
https://m.bcsuddi.com
on your mobile browser.
Advertisement

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

10:26 AM Nov 19, 2023 IST | Bcsuddi
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ
Advertisement

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಚಿತ್ತಾಪೂರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿದ್ದ ವೇಳೆ ಶಹಾಬಾದ ಬಳಿ ಅಪರಿಚಿತರು ಮಣಿಕಂಠ ಅವರ ವಾಹನ ತಡೆದಿದ್ದಾರೆ.

ಬಳಿಕ ಬಿಯರ್ ಬಾಟಲ್​ಗಳಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.ಇನ್ನು ದಾಳಿಯಿಂದ ಮಣಿಕಂಠ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Author Image

Advertisement