ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಟ್ ಕಾಯಿನ್ ಹಗರಣ ಕೇಸ್; ಆರೋಪಿ ಶ್ರೀಕಿ ಬಂಧನ

04:20 PM May 07, 2024 IST | Bcsuddi
Advertisement

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು (ಎಸ್ಐಟಿ) ಬಂಧಿಸಿದ್ದಾರೆ.

Advertisement

2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ಯುನೋ ಕಾಯಿನ್ ಕಳವು ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.

2015 ರಲ್ಲಿ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಬಿಟ್‌ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ ಗೆ ಸಂಬಂಧಿಸಿದಂತೆ ಶ್ರೀಕಿ ಬಂಧನವಾಗಿತ್ತು.

ಇನ್ನು ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದಾನೆ. ಜೊತೆಗೆ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್ ಜಾಲತಾಣ ಹ್ಯಾಕ್ ಮಾಡಿದ್ದನು.

Advertisement
Next Article