For the best experience, open
https://m.bcsuddi.com
on your mobile browser.
Advertisement

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್.!

08:36 AM Sep 05, 2024 IST | BC Suddi
ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್
Advertisement

ಬೆಂಗಳೂರು : ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯದ ಹಣದ ಬದಲಿಗೆ 5 ಕೆಜಿ ಅಕ್ಕಿಗೆ ನೀಡುತ್ತಿದ್ದ ಹಣದ ಬದಲು ತೊಗರಿಬೇಳೆ, ಸಕ್ಕರೆ, ತಾಳೆ ಎಣ್ಣೆ ಹಾಗೂ ಅಯೋಡೈಸ್ಡ್ ಉಪ್ಪು ನೀಡಲಿದೆ.

ಈಗಾಗಲೇ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಸಿದೆ. ಹಣಕಾಸು ಅನುಮೋದನೆಗಾಗಿ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದ್ದು, ಅಕ್ಟೋಬರ್ ನಿಂದಲೇ ಈ ನೂತನ ಯೋಜನೆ ಜಾರಿಗೆ ಬರಲಿದೆ.

Advertisement

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಪಡಿತರ ಚೀಟಿದಾರರಿಗೆ ತಲಾ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಕೊರತೆಯಿಂದಾಗಿ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿಗೆ ನಗದು ಪಾವತಿಸುತ್ತಿತ್ತು. ಇದಕ್ಕೆ ಸರ್ಕಾರ ಪ್ರತಿ ತಿಂಗಳು ಬರೋಬ್ಬರಿ 700 ಕೋಟಿ ರೂ. ಅಧಿಕ ಹಣ ಭರಿಸಬೇಕಾಗುತ್ತದೆ. ಈಗಾಗಲೇ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ವಿತರಿಸಲಾಗುತ್ತಿದೆ. ಇದೀಗ ಅನ್ನಭಾಗ್ಯದ ಹಣದ ಬದಲು ಇತರೆ ದಿನಸಿ ಪದಾರ್ಥಗಳನ್ನು ನೀಡಲು ನಿರ್ಧರಿಸಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಪಡಿತರ ಚೀಟಿದಾರರಿಗೆ ದಿನಸಿ ಕಿಟ್ ನೀಡುವ ಕುರಿತು ಅಂತಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
Author Image

Advertisement