ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ.!

07:16 AM May 14, 2024 IST | Bcsuddi
Advertisement

ಪಟ್ನಾ: ಬಿಜೆಪಿಯ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ (72) ಅವರು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್ಗೆ ತುತ್ತಾಗಿದ್ದರು.

Advertisement

ಮೋದಿ ಅವರು ಬಿಹಾರದ ಉಪ ಮುಖ್ಯಮಂತ್ರಿಯಾಗಿ 2005ರಿಂದ 2013ರವರೆಗೆ ಹಾಗೂ 2017ರಿಂದ 2020ರವರೆಗೆ ಕರ್ತವ್ಯ ನಿರ್ವಹಿಸಿದ್ದರು.

ಸುಶೀಲ್ ಕುಮಾರ್ ಮೋದಿ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ಪಟ್ನಾದಲ್ಲಿ ಮಂಗಳವಾರ ನಡೆಯಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ತಾವು ಕ್ಯಾನ್ಸರ್ನೊಂದಿಗೆ ಸೆಣೆಸಾಟ ನಡೆಸುತ್ತಿರುವುದಾಗಿ, ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂಬುದಾಗಿ ಅವರು ಕಳೆದ ತಿಂಗಳು ಹೇಳಿದ್ದರು.

Tags :
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ.!
Advertisement
Next Article