For the best experience, open
https://m.bcsuddi.com
on your mobile browser.
Advertisement

ಬೆಂಕಿ ಅವಘಡ ಒಂಬತ್ತು ಮಂದಿ ಸಜೀವ ದಹನ.!

08:23 AM Dec 11, 2023 IST | Bcsuddi
ಬೆಂಕಿ ಅವಘಡ ಒಂಬತ್ತು ಮಂದಿ ಸಜೀವ ದಹನ
Advertisement

ಬ್ರೆಜಿಲ್‌ನ : ಉತ್ತರ ರಾಜ್ಯವಾದ ಪಾರಾದಲ್ಲಿ ಭೂರಹಿತ ಕಾರ್ಮಿಕ ಚಳವಳಿ ಎಂಎಸ್‌ಟಿಗೆ ಸೇರಿದ ಶಿಬಿರದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಸಜೀವ ದಹನರಾಗಿದ್ದಾರೆ.

ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಎಂಎಸ್‌ಟಿ ಪ್ರಕಾರ, ಪಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಇಂಟರ್ನೆಟ್ ವೈರಿಂಗ್ ಕಾಮಗಾರಿ ವೇಳೆ ಶಾರ್ಟ್ ಸರ್ಕ್ಯೂಟ್‌ ಆಗಿ ಈ ದುರ್ಘಟನೆ ಸಂಭವಿಸಿದೆ.

Advertisement

ಸ್ಥಳೀಯ ಕಾಲಮಾನದ ಪ್ರಕಾರ ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆಂಟೆನಾವು ಹೈ-ವೋಲ್ಟೇಜ್ ನೆಟ್‌ವರ್ಕ್‌ಗೆ ತಗುಲಿದಾಗ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕೆಲವು ಗುಡಿಸಲುಗಳಿಗೆ ಬೆಂಕಿ ತಗುಲಿದೆ.

Tags :
Author Image

Advertisement