ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರಲ್ಲಿ ಝಿಕಾ ಆತಂಕ- 7 ಕೇಸ್ ಪತ್ತೆ

11:13 AM Aug 18, 2024 IST | BC Suddi
Advertisement

ಬೆಂಗಳೂರು : ಬೆಂಗಳೂರಿನಲ್ಲಿ ಝಿಕಾ ವೈರಸ್ ಭೀತಿ ಎದುರಾಗಿದೆ. ಈಗಾಗಲೆ ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದರ ಜೊತಗೆ ಅಗತ್ಯ ಕ್ರಮ ವಹಿಸಲು ಮುಂದಾಗಿದೆ.

Advertisement

ಈಡಿಸ್ ಸೊಳ್ಳೆಯಿಂದ ಹರಡುವ ಝಿಕಾ, ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಗುಣ ಲಕ್ಷಣಗಳನ್ನು ಹೊಂದಿದೆ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ.

ರೋಗಲಕ್ಷಣಗಳು ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 

Advertisement
Next Article