For the best experience, open
https://m.bcsuddi.com
on your mobile browser.
Advertisement

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

02:13 PM May 14, 2024 IST | Bcsuddi
ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ
Advertisement

ಬೆಂಗಳೂರು: ಖಾಸಗಿ ಶಾಲೆಗೆ ತಡರಾತ್ರಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಶಾಲೆಯನ್ನು ಸ್ಫೋಟಿಸುವುದಾಗಿ ಮೇಲ್‌ನಲ್ಲಿ ತಿಳಿಸಲಾಗಿದೆ. ನಗರದ ಅಮೃತಹಳ್ಳಿಯ ಕೆಂಪಾಪುರದಲ್ಲಿರುವ ಜೈನ್ ಹೆರಿಟೇಜ್ ಖಾಸಗಿ ಶಾಲೆಗೆ ದುಷ್ಕರ್ಮಿಗಳು ಮಧ್ಯರಾತ್ರಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 7.30 ರವರೆಗೆ ಶಾಲೆ ಸಿಬ್ಬಂದಿ ಕಚೇರಿ ತೆರೆದಾಗ ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.30 ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಸದ್ಯ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ. ಪರಿಶೀಲನೆಯಲ್ಲಿ ಇದೊಂದು ಹುಸಿ ಬಾಂಬ್ ಮೇಲ್ ಎನ್ನುವುದು ದೃಢವಾಗಿದೆ. ನಿನ್ನೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು.

Author Image

Advertisement