For the best experience, open
https://m.bcsuddi.com
on your mobile browser.
Advertisement

ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭ

03:29 PM Dec 30, 2023 IST | Bcsuddi
ಬೆಂಗಳೂರು ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ  17ರಿಂದ ಆರಂಭ
Advertisement

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜ. 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್​ ಇಂಡಿಯಾ ಎಕ್ಸಪ್ರೆಸ್ ​ ಜ. 17ರಿಂದ ಬೆಂಗಳೂರು ಮತ್ತು ಕೋಲ್ಕತದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.

ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜ. 17 ರಂದು ಬೆಳಿಗ್ಗೆ 8.05 ಕ್ಕೆ ಹೊರಟು 10.35 ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3.40 ಕ್ಕೆ ಹೊರಡಲಿದ್ದು, ಸಂಜೆ 6.10 ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿದು ಬಂದಿದೆ

ಅದೇ ರೀತಿ ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11.05 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್​ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3.10 ಕ್ಕೆ ಅಯೋಧ್ಯೆಯನ್ನು ತಲುಪಲಿದೆ.

Advertisement

ಇನ್ನು ಅಯೋಧ್ಯೆ, ಬೆಂಗಳೂರು, ಕೋಲ್ಕತ್ತ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವೆಬ್‌ಸೈಟ್ (airindiaexpress.com), ಆಪ್‌ಗಳಲ್ಲಿ ಲಭ್ಯವಿದೆ ಎಂದು ಕಂಪನಿ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದೆ.

Author Image

Advertisement