ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು : ಇನ್ನು ಮುಂದೆ ಶಾಲೆ ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಿಸುವಂತಿಲ್ಲ : ರಾಜ್ಯ ಸರ್ಕಾರ ಆದೇಶ

02:43 PM Feb 15, 2024 IST | Bcsuddi
Advertisement

ಬೆಂಗಳೂರು : ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisement

ಶಾಲೆ ಮತ್ತು ಕಾಲೇಜಿಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಗುರುವಾರ ಸುತ್ತೋಲೆ ಹೊರಡಿಸಿದೆ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು,ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ.

10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ನಿಯಮ ಉಲ್ಲಂಘನೆಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.

Advertisement
Next Article