ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು : ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

04:03 PM Jun 25, 2024 IST | Bcsuddi
Advertisement

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ್ರು. ಸಭೆ ಬಳಿಕ ಮಾತನಾಡಿದ ಸಿಎಂ, ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು. ಸರ್ಕಾರ, ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Advertisement

Advertisement
Next Article