ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಿ - ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

01:30 PM May 17, 2024 IST | Bcsuddi
Advertisement

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದಲ್ಲಿ ಮಳೆ ಮುಂಜಾಗ್ರತಾ ಕ್ರಮ, ರಸ್ತೆ ಗುಂಡಿ ಮುಚ್ಚುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಗುರುವಾರ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, 'ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳ ವಲಯ ಆಯುಕ್ತರು ರಸ್ತೆ ಗುಂಡಿಗಳು ಬಿದ್ದಿರುವುದನ್ನು ಪರಿಶೀಲಿಸಿ ಕೂಡಲೆ ಅವುಗಳನ್ನು ಮುಚ್ಚಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಸರಿಯಾಗಿ ಡಾಂಬರು ಮಿಶ್ರಣ ವ್ಯವಸ್ಥೆ ಮಾಡುವ ಏಜೆನ್ಸಿಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಡಾಂಬರು ಅವಶ್ಯಕತೆಯಿದೆ ಎಂಬುದನ್ನು ಏಜೆನ್ಸಿಗಳಿಗೆ ತಿಳಿಸಿ ಅವಶ್ಯಕ ಡಾಂಬರು ಪಡೆದು ಕೂಡಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕೆಂದು ತಿಳಿಸಿದರು. ನಗರದಲ್ಲಿ 198 ಪ್ರವಾಹ ಪೀಡಿದ ಪ್ರದೇಶಗಳ ಪೈಕಿ ಈಗಾಗಲೇ 124 ಕಡೆ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದ 74 ಸ್ಥಳಗಳ ಪೈಕಿ 24 ಕಡೆಯೂ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಲಾಗಿದ್ದು, ಉಳಿದ 50 ಸ್ಥಳಗಳಲ್ಲಿ ಯಾವುದೇ ತೊಂದರೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರಹ್ಲಾದ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.

Advertisement

Advertisement
Next Article