ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ದಿನಾಂಕ ಘೋಷಣೆ: ಜೂನ್ 03 ಕ್ಕೆ ಮತದಾನ

07:16 AM May 04, 2024 IST | Bcsuddi
Advertisement

 

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ರ‍್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ. 06 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗವು, ಬೆಂಗಳೂರು ಪದವೀಧರರ ಕ್ಷೇತ್ರದಿಂದ ರ‍್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ದಿನಾಂಕ: 09 ಮೇ. 2024 (ಗುರುವಾರ) ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನ 16 ಮೇ. 2024 (ಗುರುವಾರ), ನಾಮಪತ್ರಗಳ ಪರಿಶೀಲನೆ ದಿನಾಂಕ- 17 ಮೇ. 2024 (ಶುಕ್ರವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ - 20 ಮೇ. 2024 (ಸೋಮವಾರ), ಮತದಾನದ ದಿನಾಂಕ -03 ಜೂನ್. 2024 (ಸೋಮವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- ಜೂನ್ 06. 2024 (ಗುರುವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ-  ಜೂನ್12. 2024 ( ಬುಧವಾರ). ಮತದಾನದ ಸಮಯ ಬೆಳಿಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ನಡೆಯಲಿದೆ. ಚುನಾವಣೆಯ ಮಾದರಿ ನೀತಿ ಸಂಹಿತೆಯು ಮೇ 02 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪದವೀಧರರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 9378 ಪುರುಷ ಪದವೀಧರರು ಹಾಗೂ 8270 ಮಹಿಳಾ ಪದವೀಧರರು ಸೇರಿ ಒಟ್ಟು 17648 ಪದವೀಧರ ಮತದಾರರು ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

Tags :
Date Announcement for Bangalore Graduate Constituency Election: Voting on June 03
Advertisement
Next Article