ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು : ಪವರ್ ಟಿ.ವಿ ಪ್ರಸಾರ ಜುಲೈ 8ರವರೆಗೂ ಸ್ಥಗಿತ - ಹೈಕೋರ್ಟ್ ಆದೇಶ

11:51 AM Jun 26, 2024 IST | Bcsuddi
Advertisement

ಬೆಂಗಳೂರು : ಪರವಾನಗಿ ನವೀಕರಿಸಿದ ಆರೋಪ ಎದುರಿಸುತ್ತಿರುವ ಹಿನ್ನೆಲೆ ಪವರ್ ಟಿ.ವಿ ಕನ್ನಡ ಚಾನೆಲ್ ತಕ್ಷಣದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ಸ್ಥಗಿತ ಗೊಳಿಸುವಂತೆ ಹೈ ಕೋರ್ಟ್ ಆದೇಶ ಹೊರಡಿಸಿದೆ. ಮಂಗಳವಾರ ಏಕಸದಸ್ಯ ನ್ಯಾಯ ಪೀಠದಲ್ಲಿ ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ. ರಮೇಶ್ ಗೌಡ, ಡಾ. ಎ ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಸಲ್ಲಿಸಿದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ, ವಾದ ಮಂಡಿಸಿದ ಹೈಕೋರ್ಟ್ ಹಿರಿಯ ವಕೀಲ ಪ್ರಭುಲಿಂಗ ಪ್ರತಿವಾದಿ ರಾಕೇಶ್ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದರೆ, ವಾಸ್ತವದಲ್ಲಿ ಇವರ ಚಾನೆಲ್ ಕಾನೂನುಬಾಹಿರವಾಗಿ ನಡೆಯುತ್ತಿದೆ. 2021ರಿಂದಲೂ ಚಾನೆಲ್ ನ ಪರವಾನಗಿ ನವೀಕರಿಸಿಲ್ಲ ಎಂಬ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ಬಳಿಕ ಈ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ರಾಕೇಶ್ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಗಳ ಕಾಯ್ದೆ 1995ದ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್ ನಲ್ಲಿ ಪ್ರಸಾರವಾಗುವ ಸುದ್ದಿಗಳನ್ನು ಜುಲೈ 8ರ ವರೆಗೂ ಪ್ರಸಾರ ಮಾಡಬಾರದು ಎಂದು ಆದೇಶ ಹೊರಡಿಸಿದೆ.

Advertisement

Advertisement
Next Article