ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು ಮತ್ತು ಮೈಸೂರಿನ ಪ್ರತಿಷ್ಠಿತ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

02:27 PM Jun 24, 2024 IST | Bcsuddi
Advertisement

ಬೆಂಗಳೂರು: ಪ್ರತಿಷ್ಠಿತ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ‌. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳಲ್ಲಿ ಸೇರದಂತೆ 11 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಬಿಲ್ಡರ್‌ಗಳು ಮತ್ತು ಕೆಲ ಕಂಪನಿಗಳ ವಿರುದ್ಧ ಅನೇಕ ಅವ್ಯವಹಾರಗಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಹಣ ಲೇವಾದೇವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 8 ಸ್ಥಳಗಳಲ್ಲಿ ಇತ್ತೀಚೆಗೆ ದಾಳಿ ನಡೆಸಿದ್ದ ಇ.ಡಿ 11.5 ಕೋಟಿ ರೂ ಹಣ, ಕೆಲ ದಾಖಲೆಗಳನ್ನ ವಶಪಡಿಸಿಕೊಂಡಿತ್ತು.

Advertisement

Advertisement
Next Article