ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು : ಮುಡಾ ಪ್ರಕರಣ ಬೆನ್ನಲ್ಲೇ ಸಿದ್ದರಾಮಯ್ಯ ಮೇಲೆ ಮತ್ತೊಂದು ಭೂಕಬಳಿಕೆ ಆರೋಪ ಮಾಡಿದ ಎಚ್‌ಡಿಕೆ

10:43 AM Sep 15, 2024 IST | BC Suddi
Advertisement

ಬೆಂಗಳೂರು : ಮುಡಾ ನಿವೇಶನಗಳನ್ನು ಕಬಳಿಸಿದ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಹಗರಣ ಜನಮಾನಸದಲ್ಲಿ ಮಾಸುವ ಮುನ್ನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಮುಡಾದಿಂದ ಹಂಚಿಕೆ ಆಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ಕಟ್ಟಿಸಿದ್ದಾರೆ. ಬಳಿಕ ಆ ಮನೆಯನ್ನು ಮಾರುವ ನಾಟಕ ಆಡಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತ ದಾಖಲೆಗಳು ನನ್ನ ಬಳಿ ಇವೆ ಎಂದು ಹೇಳಿದರು. ಈ ರಾಜ್ಯಕ್ಕೆ ಉಪ ಮುಖ್ಯಮಂತ್ರಿ ಆಗಿದ್ದಾಗ ನೀವು ಯಾರ ಜಾಗವನ್ನು ಲಪಟಾಯಿಸಿ ಮನೆ ಕಟ್ಟಿದಿರಿ ಸ್ವಾಮಿ? ಅದರ ದಾಖಲೆ ಬೇಕಾ ನಿಮಗೆ? ದಲಿತರಿಗೆ ಮೂಡದಿಂದ ಹಂಚಿಕೆ ಆಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದವರು ಯಾರು ಎಂಬುದನ್ನು ಸ್ವಲ್ಪ ಹೇಳುತ್ತೀರಾ? 15 ನಿವೇಶನ ಬರೆಸಿಕೊಂಡಿರುವುದು ಅಷ್ಟೇ ಅಲ್ಲ, ಅದಕ್ಕೆ ಮೀರಿದ ಹಗರಣಗಳನ್ನು ಇವರು ಮಾಡಿದ್ದಾರೆ ಎಂದರು. ದಲಿತ ವಿಶೇಷಚೇತನರೊಬ್ಬರಿಗೆ ಬಳಿ ₹24,000 ಕಟ್ಟಿಸಿಕೊಂಡು ಮೂಡದಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಆ ಜಾಗದ ಸುಳ್ಳು ದಾಖಲೆ ಸೃಷ್ಟಿ ಮಾಡಿಕೊಂಡು ಸಾಕಮ್ಮ ಎಂಬುವವರ ಹೆಸರಿನಲ್ಲಿ 10 ಸಾವಿರ ಚದರ ಅಡಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರು ಇವರು. ಆಮೇಲೆ ನಿವೇಶನದ ನಿಜ ಮಾಲೀಕರು ಬಂದು ನೋಡಿದರೆ ಅಲ್ಲಿ ಮನೆ ಕಟ್ಟಲಾಗಿತ್ತು. ಈ ಬಗ್ಗೆ ಜನ ಮರೆತಿರಬಹುದು, ಈ ಕುಮಾರಸ್ವಾಮಿ ಬಳಿ ಈಗಲೂ ದಾಖಲೆ ಇದೆ ಎಂದು ಕೇಂದ್ರ ಸಚಿವರು ಹೇಳಿದರು. ನನ್ನ ಜೀವನ ತೆರದ ಪುಸ್ತಕ ಎಂದು ಯಾವಾಗಲೂ ಹೇಳುತ್ತಾರೆ ಅವರು. ಆ ತೆರೆದ ಪುಸ್ತಕವನ್ನು ಜನ ಒಮ್ಮೆ ತೆರೆದು ನೋಡಬೇಕು. ನಿವೇಶನ ಹೊಡೆದುಕೊಂಡರು, ಆಮೇಲೆ ಅಕ್ರಮವಾಗಿ ಮನೆ ಕಟ್ಟಿಕೊಂಡರು, ನಂತರ ಅದನ್ನು ಯಾರಿಗೆ ಮಾರಾಟ ಮಾಡಿದರು? ಇಷ್ಟಕ್ಕೂ ಯಾರಿಗೆ ಮಾಡಿದರು? ಈಗ ಯಾರ ಬಾಕಿ ಇದೆ ಅದು? ಸುಮ್ಮನೆ ಜನರ ಕಣ್ಣಿಗೆ ಮಂಕುಬೂದಿ ಎರಚಲು ಮಾರಾಟ ಎಂದು ತೋರಿಸಿಕೊಂಡಿದ್ದಾರೆ. ಎಲ್ಲವನ್ನೂ ತೆಗೆದು ನೋಡಿದರೆ ಅಸಲಿ ಬಣ್ಣ ಗೊತ್ತಾಗುತ್ತದೆ. ಆಗ ಇನ್ನೊಂದು ಹಗರಣ ಶುರುವಾಗುತ್ತದೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Next Article