For the best experience, open
https://m.bcsuddi.com
on your mobile browser.
Advertisement

ಬೆಂಗಳೂರು ; 5,8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟ

11:45 AM Apr 08, 2024 IST | Bcsuddi
ಬೆಂಗಳೂರು   5 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟ
Advertisement

ಬೆಂಗಳೂರು ; 5, 8 ಮತ್ತು 9ನೇ ತರಗತಿ ರಾಜ್ಯ ಪಠ್ಯಕ್ರಮದ ಶಾಲೆಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಇಂದು ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೂಚನೆ ನೀಡಲಾಗಿದೆ.

2023-24ನೇ ಸಾಲಿನಲ್ಲಿ ಅನುದಾನಿತ, ಅನುದಾನ ರಹಿತ, ರಾಜ್ಯ ಪಠ್ಯಕ್ರಮದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ತಿಂಗಳು ಮಾರ್ಚ್‌ನಲ್ಲಿ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಬ್ಲಾಕ್ ಹಂತದಲ್ಲೇ ಮೌಲ್ಯ ಮಾಪನ ಕಾರ್ಯವನ್ನು ಪೂರ್ಣಗೊಳಿಸುವಂತೆ ಹಾಗೂ ಉತ್ತರ ಪತ್ರಿಕೆಗಳ ಸಹಿತ ಶಾಲಾವಾರು ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿರುವಂತೆ ಆಯಾ ಶಾಲೆಗಳಿಗೆ ರವಾನಿಸಲಾಗಿದೆ. ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಡಳಿಗೆ, ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಗಳು ತಮ್ಮ ಕಚೇರಿಗೆ ಮಾಹಿತಿ ನೀಡಬೇಕೆಂದು ಮಂಡಳಿಯ ಅಧ್ಯಕ್ಷರು ಸೂಚಿಸಿದ್ದಾರೆ.

Advertisement
Author Image

Advertisement