ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಳಗಾವಿ ಅಧಿವೇಶನದಲ್ಲಿ ತಮ್ಮದೆ ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡಿದ ಯತ್ನಾಳ್

09:30 AM Dec 13, 2023 IST | Bcsuddi
Advertisement

ಬೆಳಗಾವಿ: ತನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ 105 ಕೋಟಿ ರೂಪಾಯಿ ಅನುದಾನವನ್ನು ಹಿಂದಿನ ಬಿಜೆಪಿ ಸರಕಾರದಿಂದ ತಡೆ ಹಿಡಿಯಲಾಯಿತು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಮೂಲಕ ಯತ್ನಾಳ್ ಅವರು ತಮ್ಮದೆ ಪಕ್ಷಕ್ಕೆ ಮತ್ತೊಮ್ಮೆ ಮುಜುಗರ ತಂದಿದ್ದಾರೆ.

Advertisement

ಮಂಗಳವಾರ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ತಾವು ಪ್ರತಿನಿಧಿಸುವ ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ 105 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದರು. ದುರದೃಷ್ಟವಶಾತ್, ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ತಡೆ ಹಿಡಿಯಲಾಯಿತು ಮತ್ತು ರದ್ದುಗೊಳಿಸಲಾಯಿತು ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರು ಹಣ ಬಿಡುಗಡೆ ಮಾಡಿ ಸಹಾಯ ಮಾಡಿದ್ದರು. ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ನಿವೃತ್ತರಾಗಿದ್ದಾರೆ, ಯಾರನ್ನಾದರೂ ಟಾರ್ಗೆಟ್ ಮಾಡಿದರೆ ಅವರು ಅಧಿಕಾರ ಕಳೆದುಕೊಳ್ಳುವುದನ್ನು ನೋಡಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದರು.

"ಹೆಚ್ಚು ಮಾತನಾಡಬೇಡಿ ಎಂದು ಜನರು ನನಗೆ ಸಲಹೆ ನೀಡುತ್ತಾರೆ. ಇದರಿಂದ ಸಿಎಂ ಆಗುವ ಅವಕಾಶವನ್ನು ಹಾಳು ಮಾಡಿಕೊಂಡಿದ್ದೇನೆ. ಆದರೆ, ನಾನು ಯಾರಿಗೂ ಹೆದರುವುದಿಲ್ಲ ಮತ್ತು ನೇರವಾಗಿ ಸಂದೇಶವನ್ನು ರವಾನಿಸುತ್ತೇನೆ ಎಂದರು.

Advertisement
Next Article