For the best experience, open
https://m.bcsuddi.com
on your mobile browser.
Advertisement

ಬೆಳ್ತಂಗಡಿ: ಜಾಮೀನು ಪಡೆದು ಬಿಡುಗಡೆ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಎಚ್.ಡಿ.ರೇವಣ್ಣ ಭೇಟಿ

01:44 PM May 27, 2024 IST | Bcsuddi
ಬೆಳ್ತಂಗಡಿ  ಜಾಮೀನು ಪಡೆದು ಬಿಡುಗಡೆ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಎಚ್ ಡಿ ರೇವಣ್ಣ ಭೇಟಿ
Advertisement

ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ‌ ಪಡೆದರು.

ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ ಅವರು ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ‌. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ತಾನು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಭಕ್ತ. ಸದಾ ಸ್ವಾಮಿಯ ದರ್ಶನಕ್ಕೆ ಬರುತ್ತಿರುತ್ತೇನೆ.

ಆದ್ದರಿಂದ ಇಂದೂ ಕೂಡಾ ಬಂದಿದ್ದೇನೆ. ಕಳೆದ 40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ.‌ 25 ವರ್ಷಗಳ ಕಾಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ. ದೇವರ ಬಗ್ಗೆಯೂ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಬೇರೆ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸದೆ ತೆರಳಿದರು.

Advertisement

Author Image

Advertisement