For the best experience, open
https://m.bcsuddi.com
on your mobile browser.
Advertisement

ಬೆಳ್ಳಂ ಬೆಳಿಗ್ಗೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಅಧಿಕಾರಿಗಳಿಗೆ ಶಾಕ್.!

08:07 AM Jul 19, 2024 IST | Bcsuddi
ಬೆಳ್ಳಂ ಬೆಳಿಗ್ಗೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಅಧಿಕಾರಿಗಳಿಗೆ ಶಾಕ್
Advertisement

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಶೋಧಕಾರ್ಯ ನಡೆಸಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರೆದಿದೆ.

ಈ ಶೋಧಕಾರ್ಯದಲ್ಲಿ ಸುಮಾರು 100 ಕ್ಕೂ ಲೋಕಾಯುಕ್ತ ಪೊಲೀಸರು ಹಾಗೂ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಬೇಕಿದೆ.

Advertisement

Tags :
Author Image

Advertisement