ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಳ್ಳುಳ್ಳಿ ಹಾಗೂ ಈರುಳ್ಳಿ ಬೆಲೆ ಗಗನಕ್ಕೆ.! ಬೆಲೆ ಎಷ್ಟು.?

07:40 AM Aug 28, 2024 IST | BC Suddi
Advertisement

 

Advertisement

ಬೆಂಗಳೂರು : ಬೆಳ್ಳುಳ್ಳಿ ಹಾಗೂ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಬೆಳ್ಳುಳ್ಳಿ ದರ ಕೆಜಿಗೆ 400 ರೂ. ಗಡಿ ದಾಟಿದ್ರೆ, ಈರುಳ್ಳಿ ದರ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದೆ.

ಮಧ್ಯಪ್ರದೇಶದಿಂದ ಆವಕ ಇಳಿಕೆಯಾಗಿರುವುದರಿಂದ ಬೆಳ್ಳುಳ್ಳಿ ಬೆಲೆ 400 ರ ಗಡಿ ದಾಟಿದೆ. ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ.

ಈರುಳ್ಳಿ ದರ ಕೂಡ ಏರಿಕೆ ಕಂಡಿದ್ದು, ಭಾರಿ ಮಳೆಯಿಂದ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 52 ರೂ. ದಾಟಿದ್ದು, ಸೂಪರ್ ಮಾರ್ಕೆಟ್ ಗಳಲ್ಲಿ 80 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Tags :
ಬೆಳ್ಳುಳ್ಳಿ ಹಾಗೂ ಈರುಳ್ಳಿ ಬೆಲೆ ಗಗನಕ್ಕೆ.! ಬೆಲೆ ಎಷ್ಟು.?
Advertisement
Next Article