ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೇಬಿಕಾರ್ನ್ ಪೆಪ್ಪರ್ ಫ್ರೈ ಮಾಡುವ ವಿಧಾನ

09:08 AM Aug 20, 2024 IST | BC Suddi
Advertisement

ಬೇಕಾಗುವ ಪದಾರ್ಥಗಳು...

Advertisement

  • ಬೇಬಿ ಕಾರ್ನ್- 9
  • ಬೆಳ್ಳುಳ್ಳಿ ಪೇಸ್ಟ್- 1 ಚಮಚ
  • ಈರುಳ್ಳಿ- ಸಣ್ಣಗೆ ಹೆಚ್ಚಿದ್ದು 1-2
  • ಕಾಳುಮೆಣಸಿನ ಪುಡಿ- 1 ಚಮಚ
  • ಉಪ್ಪು ರುಚಿಗೆ ತಕ್ಕಷ್ಟು
  • ಎಣ್ಣೆ- 2 ಚಮಚ
  • ಕರಿಬೇವು- ಸ್ವಲ್ಪ
  • ಹಸಿಮೆಣಿಸಿನ ಕಾಯಿ- 3-4
  • ಸೋಯಾ ಸಾಸ್- ಕಾಲು ಚಮಚ
  • ವಿನೆಗರ್- ಅರ್ಧ ಚಮಚ

ಮಾಡುವ ವಿಧಾನ...

  • ಮೊದಲಿಗೆ ಬೇಬಿ ಕಾರ್ನ್ ಗಳನ್ನು ಚೆನ್ನಾಗಿ ತೊಳೆದು ಉದ್ದಕ್ಕೆ ಕತ್ತರಿಸಿಕೊಳ್ಳಿ. ನಂತರ ಒಲೆಯ ಮೇಲೆ ಪಾತ್ರೆಯಿಟ್ಟು, ಅದಕ್ಕೆ ನೀರು ಹಾಗೂ ಸ್ವಲ್ಪ ಉಪ್ಪು ಹಾಕಿ ತೊಳೆದು ಕತ್ತರಿಸಿಕೊಂಡ ಬೇಬಿ ಕಾರ್ನ್ ಗಳನ್ನು ಹಾಕಿ. 5-10 ನಿಮಿಷ ಬೇಯಿಸಿಕೊಳ್ಳಿ.
  • ಒಲೆಯ ಮೇಲೆ ಬಾಣಲೆ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ. ಕಾದ ನಂತರ ಕರಿಬೇವು ಹಾಕಿ ಸಣ್ಣ ಉರಿಯಲ್ಲಿ ಕೆಂಪಗೆ ಹುರಿದುಕೊಂಡು, ತಟ್ಟೆಯೊಂದಕ್ಕೆ ಹಾಕಿ ತೆಗೆದಿಟ್ಟುಕೊಳ್ಳಿ.
  • ಇದೇ ಎಣ್ಣೆಗೆ ಬೆಳ್ಳುಳ್ಳಿ ಹಾಗೂ ಈರುಳ್ಳಿಯನ್ನು ಹಾಕಿ ಕೆಂಪಗೆ ಹುರಿದುಕೊಳ್ಳಿ. ನಂತರ ಹಸಿಮೆಣಸಿನ ಕಾಯಿ, ರುಚಿಗೆ ತಕ್ಕಷ್ಟು ಉಪ್ಪು, ಸೋಯಾ ಸಾಸ್, ವಿನಿಗರ್ ಹಾಗೂ ಬೇಯಿಸಿಕೊಂಡ ಬೇಬಿ ಕಾರ್ನ್ ಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಕೊನೆಯಲ್ಲಿ ಈಗಾಗಲೇ ಹುರಿದಿಟ್ಟುಕೊಂಡ ಕರಿಬೇವು ಹಾಗೂ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿದರೆ ರುಚಿಕರವಾದ ಬೇಬಿಕಾರ್ನ್ ಪೆಪ್ಪರ್ ಫ್ರೈ ಸವಿಯಲು ಸಿದ್ಧ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article