For the best experience, open
https://m.bcsuddi.com
on your mobile browser.
Advertisement

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ಒಟ್ಟು 44 ಕೋಟಿ ರೂ. ದಂಡ!

04:56 PM Oct 26, 2024 IST | BC Suddi
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ  ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಜೈಲು ಶಿಕ್ಷೆ  ಒಟ್ಟು 44 ಕೋಟಿ ರೂ  ದಂಡ
Advertisement

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನೀಡಿದ್ದು ಇಂದು ಜೈಲು ಶಿಕ್ಷೆ ಪ್ರಕಟಿಸಿದೆ. ಅದರಂತೆ ಸೈಲು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಿದೆ.

ಮುಟ್ಟುಗೋಲು ಹಾಕಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

Advertisement
Author Image

Advertisement