ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೈಕ್ ಸವಾರಿ ಮಾಡಿದ ಅಪ್ರಾಪ್ತ ಮಗ - ಅಮ್ಮನಿಗೆ ಬಿತ್ತು 30 ಸಾವಿರ ರೂ. ಗಳ ದಂಡ

12:58 PM Feb 08, 2024 IST | Bcsuddi
Advertisement

ಶಿವಮೊಗ್ಗ: ತಾಯಿ ಹೆಸರಿನಲ್ಲಿದ್ದ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಮಗ ಚಲಾಯಿಸಿದ್ದಕ್ಕೆ ಶಿವಮೊಗ್ಗದ ಮಾನ್ಯ ನ್ಯಾಯಾಲಯ 30 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಶಿವಮೊಗ್ಗದ ಎಸ್.ಪಿ.ಎಂ. ರಸ್ತೆಯಲ್ಲಿ ವಾಹನ ಚಾಲನೆ ಮಾಡಿಕೊಂಡು ಬಂದ ಅಪ್ರಾಪ್ತ ಬಾಲಕನಿಗೆ ಈ ವೇಳೆ ತಪಾಸಣೆ ನಡಸುತ್ತಿದ್ದ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

Advertisement

ವಾಹನ ಚಾಲನಾ ಪರವಾನಿಗೆ ಇಲ್ಲದೇ ವಾಹನ ಚಾಲನೆ ಮಾಡಿದ್ದ ಬಾಲಕ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ. ಈ ಹಿನ್ನೆಲೆಯಲ್ಲಿ, ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ತಾಯಿ ವಿರುದ್ಧ ಟ್ರಾಫಿಕ್ ಪೊಲೀಸರು, ಪ್ರಕರಣ ದಾಖಲಿಸಿದ್ದು, 3ನೇ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ದಂಡ ವಿಧಿಸಿದೆ. ವಾಹನದ ಮಾಲೀಕರಾದ ತಾಯಿಗೆ 30,000 ದಂಡ ವಿಧಿಸಿ, ಮಾನ್ಯ ನ್ಯಾಯಾಲಯ ಆದೇಶ ಮಾಡಿದೆ.

Advertisement
Next Article