ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಬ್ರಾಹ್ಮಣರಾದರೂ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು' - ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ

02:02 PM Oct 03, 2024 IST | BC Suddi
Advertisement

ಬೆಂಗಳೂರು: ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು. ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಅವರು ಗೋಹತ್ಯೆಯ ವಿರೋಧಿಯಲ್ಲ. ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಈ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. 'ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ಅವರ ವಾದ ಅಲ್ಲ. ಗೋಡ್ಸೆಗೆ ಉತ್ತರ ಗಾಂಧೀಜಿಯವರೇ. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದ ಎದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು, ರಾಷ್ಟ್ರೀಯವಾದ ಕಾಣಲು ಸಾಧ್ಯವಾದರೂ, ಪ್ರಜಾಪ್ರಭುತ್ವದ ಪರವಾದ ವ್ಯಕ್ತಿತ್ವ ಇರಲಿಲ್ಲ. ಆದರೆ ಗಾಂಧೀಜಿ ಅವರದ್ದು ಡೆಮಾಕ್ರೆಟಿಕ್ ವ್ಯಕ್ತಿತ್ವ' ಎಂದು ದಿನೇಶ್ ಗುಂಡೂರಾವ್ ಹೇಳಿದರು. ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು.‌ ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಷ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ. ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ. ಇದು ಯುರೋಪ್‌ನಿಂದ ಬಂದಿರುವಂತದ್ದು. ಸಾವರ್ಕರ್ ಯೂರೋಪ್‌ನಿಂದ ಸಾಕಷ್ಟು ಪ್ರಭಾವ ಹೊಂದಿದ್ದರು. ಆದರೆ ಗಾಂಧೀಜಿಯವರು ಸಸ್ಯಹಾರಿ. ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು ಎಂದರು.

Advertisement

Advertisement
Next Article