For the best experience, open
https://m.bcsuddi.com
on your mobile browser.
Advertisement

ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ಸಾವು

05:20 PM May 29, 2024 IST | Bcsuddi
ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ಸಾವು
Advertisement

ಲಕ್ನೋ: ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.

ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರೇಹಾನ್‌ (17) ಮತ್ತು ಶಹಜಾನ್‌ (24) ಎಂಬ ಯುವಕರು ಔಷಧಿ ಖರೀದಿಸಲು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

Advertisement

Author Image

Advertisement