ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಭಕ್ತರೆ ಎಚ್ಚರ..!: ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್

12:36 PM Feb 21, 2024 IST | Bcsuddi
Advertisement

ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.

Advertisement

ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದಕ್ಕೆ ಹಣ ಕಳಿಸಿದ್ದಾರಂತೆ. ಭಕ್ತ ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಕೋಟಿಗ ಟ್ಟಲೆ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.

Advertisement
Next Article