ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಭಾರಿ ಮಳೆ, ನಿಲ್ಲದ ಗುಡ್ಡ ಕುಸಿತ : ಶೃಂಗೇರಿ ಶಾರದಾ ದೇಗುಲ ಸುತ್ತಮುತ್ತ ನಿಷೇಧಾಜ್ಞೆ ಜಾರಿ..!

06:02 PM Aug 04, 2024 IST | BC Suddi
Advertisement

ಪುರಾಣ ಪ್ರಸಿದ್ದ ಶೃಂಗೇರಿ ಶಾರದಾ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಂದರೆ ಶೃಂಗೇರಿ ದೇವಾಲಯದ ಸುತ್ತಮುತ್ತದ ಗಾಂಧಿ ಮೈದಾನ, ಪ್ಯಾರಲ್ ‌ರೋಡ್, ಪಾರ್ಕಿಂಗ್ ಸ್ಥಳ ಸೇರಿದಂತೆ ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶ ಎರಡು ಭಾರಿ ಮುಳುಗಡೆಯಾಗಿತ್ತು. ಇದೀಗ ಮತ್ತೆ ಮಳೆ ಹೆಚ್ಚಾದಂತೆ ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ ನೆರೆ ಆತಂಕ ಭೀತಿ ಶುರುವಾಗಿದ್ದರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸ್ಥಳೀಯರು ,ಪ್ರವಾಸಿಗರು ಸೇರಿದಂತೆ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಗಾಂಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳನ್ನ ತೆರೆಯದಂತೆ ಸೂಚನೆ ನೀಡಲಾಗದೆ. ಅಲ್ಲದೇ ವಾಹನಗಳ ಪಾರ್ಕಿಂಗ್ ಮಾಡದಂತೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Advertisement

Advertisement
Next Article