ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.!

10:54 AM May 26, 2024 IST | Bcsuddi
Advertisement

 

Advertisement

ಹಾಸನ: ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ.

ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು. ಎಲ್ಲರೂ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎಂದು ತಿಳಿದುಬಂದಿದೆ.

ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್ಗೆ ಗುದ್ದಿದೆ. ಘಟನೆ ವಿವರ ಇನ್ನಷ್ಟೇ ತಿಳಿಯಬೇಕಿದೆ.

Tags :
ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.!
Advertisement
Next Article