ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಂಗಳೂರು: 'ಗೆಟ್ ಔಟ್ ಫ್ರಂ ಹಿಯರ್'- ಮುಖ್ಯ ಇಂಜಿನಿಯರ್ ಗೆ ಸಚಿವ ಭೈರತಿ ಗರಂ

10:48 AM Nov 25, 2023 IST | Bcsuddi
Advertisement

ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಮುಖ್ಯ ಇಂಜಿನಿಯರ್‌ ಅವರನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ನಡೆದಿದೆ. ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್‌ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್‌ಸಿ ಮುಖ್ಯ ಇಂಜಿನಿಯರ್‌ ಜಯರಾಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶೇ.60ರಷ್ಟು ಕಾಮಗಾರಿ ನಡೆಸಲು 4 ವರ್ಷ ಹಿಡಿದಿದೆ. ಇನ್ನುಳಿದ ಶೇ.40ರಷ್ಟು ಕಾಮಗಾರಿ ಇನ್ನು ನಾಲ್ಕೈದು ತಿಂಗಳಲ್ಲಿ ಸಂಪೂರ್ಣಗೊಳಿಸಲು ಆಗುತ್ತಾ? ಎಂದು ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರರೊಂದಿಗೆ ಕೈಜೋಡಿಸಿದ್ದೀರಾ ಎಂದು ಇಂಜಿನಿಯರ್ ಮೇಲೆ ಫುಲ್ ಗರಂ ಆಗಿದ್ದಾರೆ‌. ಈ ವೇಳೆ ಇಂಜಿನಿಯರ್ ಜಯರಾಮ್‌, ‘ಹಾಗಾದರೆ ನಾನು ಕೆಲಸಕ್ಕೆ ರಿಸೈನ್ ಮಾಡ್ತೇನೆ’ ಎಂದಿದ್ದಾರೆ. ಇದರಿಂದ ಕೆಂಡಾಮಂಡಲವಾದ ಸಚಿವ ಭೈರತಿ ಸುರೇಶ್‌, 'ಗೆಟ್ ಔಟ್ ಫ್ರಂ ಹಿಯರ್' ಎಂದು ಕಿಡಿಕಾರಿದ್ದಾರೆ. ಆ ಬಳಿಕ ಅವರನ್ನು ಒಂದೂ ಮಾತನಾಡಲು ಬಿಡದೆ ಇಲ್ಲಿಂದ ಹೊರ ನಡೆಯಿರಿ ಅಂದಿದ್ದಾರೆ‌. ಕೊನೆಗೆ ಜಯರಾಂ ಸಭೆಯಿಂದ ಹೊರ ನಡೆದಿದ್ದಾರೆ. ಜಯರಾಮ್ ಕೆಯುಐಡಿಎಫ್‌ಸಿ ಮುಖ್ಯ ಇಂಜಿನಿಯರ್‌ ಆಗಿ ನಿವೃತ್ತರಾದ ಬಳಿಕ ಗುತ್ತಿಗೆ ಆಧಾರದಲ್ಲಿ ಮುಂದುವರಿದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

Advertisement

Advertisement
Next Article