For the best experience, open
https://m.bcsuddi.com
on your mobile browser.
Advertisement

ಮಂಗಳೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ- ಯುವತಿ ಆಸ್ಪತ್ರೆಗೆ ದಾಖಲು

02:42 PM Aug 20, 2024 IST | BC Suddi
ಮಂಗಳೂರು   ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ  ಯುವತಿ ಆಸ್ಪತ್ರೆಗೆ ದಾಖಲು
Advertisement

ಮಂಗಳೂರು : ಮುಸ್ಲಿಂ ಯುವತಿಗೆ ಹಿಂದೂ ಯುವಕ ಚೂರಿ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಇಬ್ಬರು ಒಂದೇ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಬಾಲಕಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಬಾಲಕ ಹಿಂದೂ ಸಮುದಾಯಕ್ಕೆ ಸೇರಿದವನು ಎಂದು ತಿಳಿದು ಬಂದಿದೆ.

ಬಾಲಕಿಗೆ ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಬಾಲಕ ಬಾಲಕಿಯ ಕೈಗೆ ಬ್ಲೇಡ್ ನಿಂದ ಇರಿದು ಪರಾರಿಯಾಗಿದ್ದಾನೆ. ಬಾಲಕಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಲ್ಲದೆ, ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಶಿಕ್ಷಕಿ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ಥೆ ಬಾಲಕಿ ಆರೋಪಿಸಿದ್ದಾಳೆ. ಸದ್ಯ ಆಸ್ಪತ್ರೆಯ ಮುಂದೆ ಜನಸ್ತೋಮ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement