For the best experience, open
https://m.bcsuddi.com
on your mobile browser.
Advertisement

ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಅಪರಾಧವಲ್ಲ ತೀರ್ಪು ವಾಪಸ್ ಪಡೆದ ಹೈಕೋರ್ಟ್..! ಕಾರಣ ಇಲ್ಲಿದೆ

11:25 AM Jul 20, 2024 IST | Bcsuddi
ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಅಪರಾಧವಲ್ಲ ತೀರ್ಪು ವಾಪಸ್ ಪಡೆದ ಹೈಕೋರ್ಟ್    ಕಾರಣ ಇಲ್ಲಿದೆ
Advertisement

ಬೆಂಗಳೂರು: ಅಂತರ್ಜಾಲದ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧವಾಗುವುದಿಲ್ಲ ಎಂದು ನೀಡಿದ್ದ ತೀರ್ಪುನ್ನು ಎರಡೇ ದಿನದಲ್ಲಿ ಕರ್ನಾಟಕ ಹೈಕೋರ್ಟ್ ವಾಪಸ್ ಪಡೆದಿದೆ. ಅಷ್ಟೇ ಅಲ್ಲದೆ, ಅದೇ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧದ ಪ್ರಕರಣದ‌ ತನಿಖೆಗೆ ಆದೇಶ ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಹೊಸಕೋಟೆಯ ಎನ್. ಇನಾಯತುಲ್ಲಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತ್ತು. ಇದೀಗ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರೇ, 'ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67ಬಿ ಬಗ್ಗೆ ತಪ್ಪು ಗ್ರಹಿಕೆಯಿಂದಾಗಿ ಸರಿಯಾದ ಆದೇಶ ನೀಡುವಲ್ಲಿ ವಿಫಲವಾಗಿರುವೆ. ನ್ಯಾಯಾಧೀಶರು ಎಂದರೆ ದೇವರಲ್ಲ. ನಾವು ಕೂಡ ಕೆಲವೊಮ್ಮೆ ತಪ್ಪು ಮಾಡುತ್ತೇವೆ. ಇದೀಗ ಕಾಯಿದೆಯ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿದೆ. ಈ ಪ್ರಕರಣದ ತನಿಖೆಯನ್ನು ನಡೆಸಲು ಆದೇಶಿಸಲಾಗಿದೆ' ಎಂದು ತಿಳಿಸಿದ್ದಾರೆ.

Author Image

Advertisement