For the best experience, open
https://m.bcsuddi.com
on your mobile browser.
Advertisement

ಮತದಾನದ ದಿನ ಹಾಗೂ ಮತ ಎಣಿಕೆ ದಿನದಂದು ಸಂತೆ, ಜಾತ್ರೆ, ಉತ್ಸವ ನಿಷೇಧ

07:18 AM Apr 25, 2024 IST | Bcsuddi
ಮತದಾನದ ದಿನ ಹಾಗೂ ಮತ ಎಣಿಕೆ ದಿನದಂದು ಸಂತೆ  ಜಾತ್ರೆ  ಉತ್ಸವ ನಿಷೇಧ
Advertisement

ಚಿತ್ರದುರ್ಗ : ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಇದೇ ಏಪ್ರಿಲ್ 26ರಂದು ಮತದಾನದ ದಿನ ಹಾಗೂ ಜೂನ್ 4ರಂದು ಮತ ಎಣಿಕೆ ದಿನದಂದು ಬೆಳಿಗ್ಗೆ 5 ರಿಂದ ಸಂಜೆ 7 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ನಡೆಯಲಿರುವ ಎಲ್ಲಾ ಬಗೆಯ ಸಂತೆ, ಜಾತ್ರೆ, ಉತ್ಸವ ನಡೆಸದಂತೆ  ನಿಷೇಧಿಸಿ  ಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ಲೋಕಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 26 ರಂದು ಮತದಾನದ ದಿನ ಹಾಗೂ ಜೂನ್ 4ರಂದು ಮತ ಎಣಿಕೆ ದಿನದಂದು ನಡೆಯುವ ಸಂತೆ, ಜಾತ್ರೆ ಹಾಗೂ ಉತ್ಸವವನ್ನು  ನಿಷೇಧಿಸಿ   ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

Advertisement

Tags :
Author Image

Advertisement