ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮತಯಾಚನೆ ವೇಳೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು

11:12 AM Apr 21, 2024 IST | Bcsuddi
Advertisement

ಬೆಂಗಳೂರು : ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನಲೆ ಉಂಟು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Advertisement

ಆರ್ ಆರ್ ನಗರ ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿದ ಬೆನ್ನಲ್ಲೇ ಇದೀಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಮತ ಪ್ರಚಾರ ಮಾಡಿದ್ದರು. ಮತಯಾಚನೆ ವೇಳೆ ಡಿಕೆಶಿ ಅವರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಕೆಶಿ ಅವರು ಮತದಾರರನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿತ್ತು. ಅದರಲ್ಲಿ ಡಿಕೆಶಿ ಅವರು ಮತಯಾಚನೆ ವೇಳೆ ಬೆದರಿಸಿದ್ದಾರೆ ಎಂದು ಆರೋಪಿಸಿರುವ ವಿಡಿಯೋವನ್ನೂ ಕೂಡ ಹಂಚಿಕೊಳ್ಳಲಾಗಿತ್ತು.

Advertisement
Next Article