For the best experience, open
https://m.bcsuddi.com
on your mobile browser.
Advertisement

ಮತ್ತೆ ಭಾರೀ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ.!

08:29 AM Oct 18, 2024 IST | BC Suddi
ಮತ್ತೆ ಭಾರೀ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ
Advertisement

ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Advertisement

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

Tags :
Author Image

Advertisement