For the best experience, open
https://m.bcsuddi.com
on your mobile browser.
Advertisement

ಮತ್ತೆ ಮುರುಘಾ ಶ್ರೀಗೆ ಜೈಲು: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

10:03 AM Apr 24, 2024 IST | Bcsuddi
ಮತ್ತೆ ಮುರುಘಾ ಶ್ರೀಗೆ ಜೈಲು  ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ
Advertisement

ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು. ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು. ಬಂಧಿಸಲಾಗಿತ್ತು. ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್‌, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಶ್ರೀಗಳ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Author Image

Advertisement