For the best experience, open
https://m.bcsuddi.com
on your mobile browser.
Advertisement

ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯ: ಪ್ರಮುಖ ಹೈಲೈಟ್ ಇಲ್ಲಿದೆ

12:31 PM Feb 01, 2024 IST | Bcsuddi
ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯ  ಪ್ರಮುಖ ಹೈಲೈಟ್ ಇಲ್ಲಿದೆ
Advertisement

ನವದೆಹಲಿ: ಇಂದು ಬಹುನಿರೀಕ್ಷಿತ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ಬಾರಿಯಂತೆ ಈ ಬಾರಿಯೂ ಪೇಪರ್ ಲೆಸ್ ಬಜೆಟ್ ಮಂಡಿಸಿದರು.

ಬೆಳಗ್ಗೆ 11 ಗಂಟೆಗೆ ಕೇಂದ್ರದ ಬಜೆಟ್ ಮಂಡನೆ ಶುರುವಾಗಿ 12 ಗಂಟೆ ವೇಳೆಗೆ ಮುಕ್ತಾಯಗೊಂಡಿತು. ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್‌ ಮಂಡಿಸಿದ ವಿತ್ತ ಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

"ನಮ್ಮ ಸರ್ಕಾರವು ಸರ್ವಾಂಗೀಣವಾದ, ಎಲ್ಲರನ್ನೂ ಒಳಗೊಳ್ಳುವ ಮತ್ತು ಸರ್ವವ್ಯಾಪಿಯಾಗಿರುವ ಅಭಿವೃದ್ಧಿಯತ್ತ ಕೆಲಸ ಮಾಡುತ್ತಿದೆ ಇದು ಎಲ್ಲಾ ಜಾತಿಗಳು ಮತ್ತು ಎಲ್ಲಾ ಹಂತಗಳಲ್ಲಿ ಜನರನ್ನು ಒಳಗೊಳ್ಳುತ್ತಿದೆ. 2047 ರ ವೇಳೆಗೆ ಭಾರತವನ್ನು ವಿಕಸಿತ ಭಾರತವನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ" ಬಜೆಟ್ ಮಂಡನೆ ವೇಳೆ ಸಚಿವೆ ತಿಳಿಸಿದರು

Advertisement

ಪ್ರಮುಖ ಹೈಲೈಟ್:

- ಆಯುಷ್ಮಾನ್ ಭಾರತ್ ಯೀಜನೆಯಡಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ

- 7 ಲಕ್ಷ ಆದಾಯ ಇರೋರಿಗೆ ತೆರಿಗೆ ವಿನಾಯಿತಿ, ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ

- ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ

‌- 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

- ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಣೆ

- ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ

- ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್

ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಿತ್ತು.ಚುನಾವಣೆಗೂ ಮುನ್ನ ಮಂಡಿಸಲಿರುವ ಬಜೆಟ್ ಆಗಿರುವುದರಿಂದ ಇದು ಪೂರ್ಣ ಪ್ರಮಾಣದ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಿರಲಿದೆ.

Author Image

Advertisement