ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ'- ಅಮಿತ್‌ ಶಾ

01:57 PM May 15, 2024 IST | Bcsuddi
Advertisement

ಕೋಲ್ಕತ್ತಾ: ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

Advertisement

ಪಶ್ಚಿಮ ಬಂಗಾಳದ ಬಂಗಾವ್‌ನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನಾಲ್ಕು ಹಂತಗಳ ಮತದಾನ ಪೂರ್ಣಗೊಂಡಿದ್ದು 380 ಸ್ಥಾನಗಳಿಗೆ ಮತದಾನ ನಡೆದಿದೆ. ಬಂಗಾಳದಲ್ಲಿ 18 ಸ್ಥಾನಗಳಿಗೆ ಮತದಾನ ಮುಗಿದಿದೆ. 380 ಕ್ಷೇತ್ರಗಳ ಪೈಕಿ ಪ್ರಧಾನಿ ಮೋದಿ ಈಗಾಗಲೇ 270 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದರು.

ಮಮತಾ ಬ್ಯಾನರ್ಜಿಯವರು ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ. ಯಾಕೆಂದರೆ ಇದು ಕೇಂದ್ರ ಸರ್ಕಾರದ ಕಾನೂನು ಎಂದು ತಿಳಿಸಿದರು.ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಯಾರಾದರೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಸುಳ್ಳು ಹೇಳುತ್ತಿದ್ದಾರೆ. ಆದರೆ ಸಿಎಎಯಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಇದರಿಂದಾಗಿ ದೇಶದಲ್ಲಿ ಗೌರವದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

 

Advertisement
Next Article