ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವು

01:07 PM Aug 19, 2024 IST | BC Suddi
Advertisement

ದೆಹಲಿ: ಆಕಸ್ಮಿಕವಾಗಿ ಎಸಿ ಬಾಕ್ಸ್ ಎರಡನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೆಹಲಿಯ ರೋಲ್‌ಬಾಗ್‌ ಪ್ರದೇಶದ ಸಮೀಪ ನಡೆದಿದೆ.

Advertisement

ಇಬ್ಬರು ಸ್ನೇಹಿತರು ರಸ್ತೆಯಲ್ಲಿ ಮಾತನಾಡುತ್ತಾ ನಿಂತಿದ್ದಾಗ ಹೊರಗೆ ಅಳವಡಿಸಿದ್ದ ಎಸಿ ಬಾಕ್ಸ್ ಬಿದ್ದಿದೆ. ಜಿತೇಶ್ ಎಂಬಾತ ಸ್ಕೂಟರ್‌ನಲ್ಲಿ ಕುಳಿತು ಪ್ರಾಂಶು ಅವರೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ವೇಳೆ ವೈದ್ಯರು ಜಿತೇಶ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದದ್ದು ಪ್ರಾಂಶು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 125 (ಎ) (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾಯ್ದೆ) ಮತ್ತು 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article