For the best experience, open
https://m.bcsuddi.com
on your mobile browser.
Advertisement

ಮಹಿಳೆಯರಿಂದ ಸಹಾಯಧನ ಮತ್ತು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

07:44 AM Nov 29, 2023 IST | Bcsuddi
ಮಹಿಳೆಯರಿಂದ ಸಹಾಯಧನ ಮತ್ತು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Advertisement

ದಾವಣಗೆರೆ,: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ಮತ್ತು ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ: ಉದ್ಯೋಗಿನಿ ಯೋಜನೆಯಡಿ 18-55 ವಯಸ್ಸಿನೊಳಗಿನ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.1,00,000 ರಿಂದ 3,00,000/-ಗಳವರೆಗೆ ಬ್ಯಾಂಕ್ ಸಾಲ ಹಾಗೂ ಸಹಾಯಧನ ನೀಡಲಾಗುವುದು. ಚೇತನ, ಯೋಜನೆಯಡಿ 18 ವರ್ಷ ಮೇಲ್ಪಟ್ಟ ದಮನಿತ ಮಹಿಳೆಯರಿಗೆ, ಧನಶ್ರೀ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಹೆಚ್.ಐ.ವಿ. ಸೋಂಕಿತ ಮಹಿಳೆಯರಿಗೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಲಿಂಗತ್ವ ಅಲ್ಪ ಸಂಖ್ಯಾತರಿಗೆ (ಟ್ರಾನ್ಸ್ ಜೆಂಡರ್) ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30000/-ಗಳ ಪೆÇ್ರೀತ್ಸಾಹಧನ ನೀಡಲಾಗುತ್ತದೆ.

Advertisement

ಅರ್ಹ ಅಭ್ಯರ್ಥಿಗಳು ಯೋಜನೆಗಳಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್  https://sevasindhu.karnataka.gov.inಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 22 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ., ಎಂ.ಸಿ.ಸಿ. "ಬಿ" ಬ್ಲಾಕ್, ಕುವೆಂಪು ನಗರ, 14 ನೇ ಮುಖ್ಯ ರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಉಪನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

Tags :
Author Image

Advertisement