ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ಬಿಗ್ ರಿಲೀಫ್.!

04:55 PM Aug 01, 2024 IST | BC Suddi
Advertisement

 

Advertisement

ಬೆಂಗಳೂರು : ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಾತಿಯಿಂದ ಬಿಎಸ್​ ಯಡಿಯೂರಪ್ಪ ನವರಿಗೆ ರಿಲೀಫ್ ಸಿಕ್ಕಿದೆ.

ಹಾಗೆ ಇತರೆ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ. ಜೊತೆಗೆ ಯಡಿಯೂರಪ್ಪರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಸಿಐಡಿ ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಸಲ್ಲಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಮಾತ್ರವಲ್ಲದೇ ಸಾಕ್ಷ್ಯ ನಾಶದ ಆರೋಪದ ಮೇಲೆ ವೈ.ಎಂ.ಅರುಣ್, ಎಂ. ರುದ್ರೇಶ್, ಜಿ.ಮರಿಸ್ವಾಮಿ ವಿರುದ್ಧವೂ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಆ.1ರಂದು ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಇತ್ತೀಚೆಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಜಾಮೀನು ವಿಸ್ತರಣೆ ಕೂಡ ಮಾಡಲಾಗಿತ್ತು. ಹೀಗಾಗಿ ಬಿಎಸ್​ವೈ ಬಂಧನ ಭೀತಿಯಿಂದ ಪಾರಾಗಿದ್ದರು.ಇದೀಗ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ನಿಗದಿಪಡಿಸಿ ಹೈಕೋರ್ಟ್ ಆದೇಶಿಸಿದೆ.

Tags :
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ಬಿಗ್ ರಿಲೀಫ್.!
Advertisement
Next Article