For the best experience, open
https://m.bcsuddi.com
on your mobile browser.
Advertisement

ಮಾನವ ಆನೆ ಸಂಘರ್ಷ ತಡೆಗೆ ಸರ್ಕಾರ ಕ್ರಮ : ಸಿಎಂ ಸಿದ್ದರಾಮಯ್ಯ

05:53 PM Aug 12, 2024 IST | BC Suddi
ಮಾನವ ಆನೆ ಸಂಘರ್ಷ ತಡೆಗೆ ಸರ್ಕಾರ ಕ್ರಮ   ಸಿಎಂ ಸಿದ್ದರಾಮಯ್ಯ
Advertisement

ಬೆಂಗಳೂರು : ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ ಸಂಘರ್ಷ ನಿರ್ವಹಣೆʼ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಈ ವೇಳೆ ಮಾತನಾಡಿದ ಅವರು, ಆನೆಗಳ ರಕ್ಷಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ವಿವರಿಸಿದರು. ಮಾನವ-ಆನೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿವೆ. ಅತಿ ಹೆಚ್ಚು ಹುಲಿ ಹೊಂದಿರುವ 2ನೇ ರಾಜ್ಯವಾಗಿದೆ. ಅಲ್ಲದೇ ಅತಿ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯವೂ ಆಗಿದೆ ಈ ಅಂತಾರಾಷ್ಟ್ರೀಯ ಸಮ್ಮೇಳನ ಮಾನವ-ಆನೆ ಸಂಘರ್ಷಗಳನ್ನ ಕಡಿಮೆ ಮಾಡುವಲ್ಲಿ ಕ್ರಮ ಕೈಗೊಳ್ಳಲು ಉತ್ತಮವಾಗಿದೆ ಎಂದು ಹೇಳಿದರು.

Advertisement

10 ವರ್ಷಗಳಲ್ಲಿ 2,500 ಮಾನವ-ಆನೆ ಸಂಘರ್ಷ ನಡೆದಿದೆ ಎಂದು ಸಿಎಂ ಮಾಹಿತಿ ನೀಡಿದರು. ಮಾನವ-ಆನೆ ಸಂಘರ್ಷ ತಡೆಗೆ ನಮ್ಮ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ. ರೈಲ್ವೆ ಬ್ಯಾರಿಕೇಡ್‌ ಅಳವಡಿಕೆ, ವಿಶೇಷ ಟಾಸ್ಕ್ ಫೋರ್ಸ್‌ ಸೇರಿದಂತೆ ಹತ್ತು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Author Image

Advertisement