ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ

10:18 AM Aug 12, 2024 IST | BC Suddi
Advertisement

ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Advertisement

ಯಾರೆಲ್ಲ ಅರ್ಜಿ ಸಲ್ಲಿಸಬಹುದು..?

1) ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,

2) ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ

3) ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ

4) ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

1)ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.

2)ಬ್ಯಾಂಕ್ ಪಾಸ್ ಬುಕ್ ಪ್ರತಿ.

3)ಪೋಟೋ.

4)ಪಹಣಿ/ಉತಾರ್/RTC.

5)ರೇಷನ್ ಕಾರ್ಡ ಪ್ರತಿ.

6)ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.

ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

Advertisement
Next Article