For the best experience, open
https://m.bcsuddi.com
on your mobile browser.
Advertisement

ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ..!

02:37 PM Oct 09, 2024 IST | BC Suddi
ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ
Advertisement

ಬೆಂಗಳೂರು: ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ (10th Class Students) ಕೃಪಾಂಕ (ಗ್ರೇಸ್​ ಮಾರ್ಕ್ಸ್)​​ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್​ ಮಾರ್ಕ್ಸ್​​ ನೀಡುವುದಿಲ್ಲ ಎಂದರು. ಕೃಪಾಂಕ ನೀಡಿದ್ದು ಅನುತ್ತೀರ್ಣಗೊಳ್ಳುವ ಅಂಚಿನಲ್ಲಿದ್ದ ವಿದ್ಯಾರ್ಥಿಗಳಿಗೆ ಇದು ವರದಾನವಾಗಿದೆ. ಶೇ5-10ರಷ್ಟು ಕೃಪಾಂಕ ನೀಡುತ್ತಿದ್ದ ಮಂಡಳಿಯು ಈ ವರ್ಷ ಇದರ ಪ್ರಮಾಣವನ್ನು ಶೇ20 ರಷ್ಟು ಹೆಚ್ಚಳ ಮಾಡಿತ್ತು.

ಸಿದ್ದರಾಮಯ್ಯ ಗರಂ
ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ20 ರಷ್ಟು ಕೃಪಾಂಕ ನೀಡಿದ್ದ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕತೆ ಹಾಗೂ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ಕಾರಣವಾಗುವ ಕೃಪಾಂಕ ವ್ಯವಸ್ಥೆಯನ್ನು ಮುಂದುವರಿಸದಂತೆ ಸ್ಪಷ್ಟ ನಿರ್ದೇಶನ ನೀಡಿದ್ದರು.

Advertisement
Author Image

Advertisement