ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಸೈನಿಕರಿಗೆ ನಮನಗಳು' - ಮೋದಿ

01:27 PM Nov 26, 2023 IST | Bcsuddi
Advertisement

ನವದೆಹಲಿ: 2008ರ ನವೆಂಬರ್ 26 ರಂದು ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು.

Advertisement

107ನೇ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ, ಜನರನ್ನು ರಕ್ಷಿಸುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರ ಸೈನಿಕರನ್ನು ಇಂದು ದೇಶವು ಸ್ಮರಿಸುತ್ತಿದೆ. ಆ ಎಲ್ಲ ವೀರ ಪುರುಷರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದರು.

ಈ ದಿನವೇ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು. 2015ರಲ್ಲಿ ಸಂವಿಧಾನ ನಿರ್ಮಾತೃ ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದ್ದೆವು. ಸಂವಿಧಾನ ದಿನದಂದು ನಾನು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ಕೋರುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

Advertisement
Next Article