ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಡಾ ಕೇಸ್‌ ತನಿಖೆಗೆ ಹೈಕೋರ್ಟ್ ಅಸ್ತು - ಸುರ್ಜೇವಾಲ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ

02:05 PM Sep 24, 2024 IST | BC Suddi
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ಹೈಕಮಾಂಡ್ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತನಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಕೋರ್ಟ್ ತೀರ್ಪಿನ ಬಗ್ಗೆ ವಿವರಣೆ ನೀಡಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹೈಕೋರ್ಟ್ ಮೊರೆ ಹೋದ ಸಂದರ್ಭದಲ್ಲಿ ಹೈಕಮಾಂಡ್ ನಾಯಕರ ಗಮನಕ್ಕೆ ತಂದು ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು. ಆಗ ಕಾನೂನು ಹೋರಾಟದಲ್ಲಿ ನಿಮ್ಮ ಜೊತೆ ನಾವು ಇರುತ್ತೇವೆ ಎಂದು ಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿತ್ತು. ಆದ್ರೆ ಈಗ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿ ತನಿಖೆಗೆ ಆದೇಶಿಸಿರೋದ್ರಿಂದ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿಸಿದೆ. ಸಿಎಂ ಸ್ಥಾನದಲ್ಲಿದ್ದುಕೊಂಡೇ ಮುಂದಿನ ಕಾನೂನು ಹೋರಾಟ ಮಾಡಿ ಅಂತಾರೋ ಅಥಾವ ಸಿಎಂ ಸ್ಥಾನದಿಂದ ಕೆಳಗಿಳಿದು ಕಾನೂನು ಹೋರಾಟ ಮಾಡಿ ಅನ್ನುತ್ತಾ ಹೈಕಮಾಂಡ್ ಅನ್ನೋದು ಪ್ರಶ್ನೆಯಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Next Article