For the best experience, open
https://m.bcsuddi.com
on your mobile browser.
Advertisement

ಮುಡಾ ಹಗರಣ ಒಪ್ಪಿಕೊಂಡ ಸರಕಾರ - ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ

10:11 AM Sep 04, 2024 IST | BC Suddi
ಮುಡಾ ಹಗರಣ ಒಪ್ಪಿಕೊಂಡ ಸರಕಾರ   ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ
Advertisement

ಬೆಂಗಳೂರು/ಮೈಸೂರು: ಕಾಂಗ್ರೆಸ್ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುವ ಮುಡಾ ಹಗರಣವನ್ನು ಬಯಲಿಗೆ ತಂದಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಎದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಗಂಗರಾಜು ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ . ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ.

ಈ ಮಧ್ಯೆ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರವೇ ಹೊರಡಿಸಿರುವ ಆದೇಶ ಈಗ ಸಿಎಂಗೆ ತಲೆನೋವಾಗುವ ಸಾಧ್ಯತೆಗಳಿವೆ. ಆರಂಭದಿಂದಲೂ 50:50 ರ ಅನುಪಾತದಲ್ಲಿ ಸೈಟ್ ಹಂಚಿಕೆ ಆಗಿದೆ ಎಂಬ ಆರೋಪವನ್ನು ವಿಪಕ್ಷ ಬಿಜೆಪಿ ಮಾಡುತ್ತಲೇ ಬಂದಿತ್ತು. ಆದರೆ ನಿನ್ನೆ(ಸೆ.02) ಹೊರಡಿಸಲ್ಪಟ್ಟಿರುವ ಅಮಾನತು ಆದೇಶದಲ್ಲಿ 50:50 ಅನುಪಾತದಲ್ಲಿ ನಿಯಮ ಬಾಹಿರವಾಗಿ ನಡೆದುಕೊಂಡಿರುವ ಕಾರಣವನ್ನು ಕೊಡಲಾಗಿದೆ. ಇದರಿಂದಾಗಿ ಬಿಜೆಪಿ ಮತ್ತು ದೂರುದಾರರ ಆರೋಪವನ್ನು ರಾಜ್ಯ ಸರ್ಕಾರವೇ ಒಪ್ಪಿಕೊಂಡಂತಾಗಿದೆ.

Advertisement

Author Image

Advertisement