For the best experience, open
https://m.bcsuddi.com
on your mobile browser.
Advertisement

ಮುಡಾ ಹಗರಣ - ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್​ ನಾಯಕ ಎಂ.ಲಕ್ಷ್ಮಣ ದೂರು

09:51 AM Aug 31, 2024 IST | BC Suddi
ಮುಡಾ ಹಗರಣ   ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್​ ನಾಯಕ ಎಂ ಲಕ್ಷ್ಮಣ ದೂರು
Advertisement

ಮೈಸೂರು:ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್​ ನಾಯಕ ಎಂ.ಲಕ್ಷ್ಮಣ ದೂರು ನೀಡಿದ್ದಾರೆ. ಇವನೊಬ್ಬ ಬ್ಲಾಕ್ ಮೇಲರ್‍ ಎಂದು ಆರೋಪಿಸಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿದೆ. ಇನ್ನು ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್​ ನಾಯಕ ಎಂ.ಲಕ್ಷ್ಮಣ ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ಹಲವೆಡೆ 17 ಕ್ರಿಮಿನಲ್ ಕೇಸ್​ಗಳು​ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿ ನಗರದ ಗಣ್ಯರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾನೆ. ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳಿ. ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡಿ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಿ ಎಂಬುವುದಾಗಿ ಮನವಿ ಮಾಡಿದ್ದಾರೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement