For the best experience, open
https://m.bcsuddi.com
on your mobile browser.
Advertisement

ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬಿಡುಗಡೆ- ನಿಷೇಧಿಸಿದ ಕರ್ನಾಟಕ ಸರ್ಕಾರ

09:26 AM Jun 07, 2024 IST | Bcsuddi
ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬಿಡುಗಡೆ  ನಿಷೇಧಿಸಿದ ಕರ್ನಾಟಕ ಸರ್ಕಾರ
Advertisement

ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ಕೋಮನ್ನು ಗುರಿಯಾಗಿರಿಸಿಕೊಂಡು ಸಿನಿಮಾಗಳು ತೆರೆ ಕಾಣುತ್ತಿವೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ರಜಾಕರ್’ ಸಿನಿಮಾಗಳ ಬೆನ್ನಲ್ಲೇ ಈಗ ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ನಿರ್ಮಾಣವಾಗಿದೆ. ಆದರೆ ಇಂದು (ಜೂನ್ 7ಕ್ಕೆ) ಬಿಡುಗಡೆ ಆಗಬೇಕಿದ್ದ ‘ಹಮಾರೆ ಬಾರಾ’ ಸಿನಿಮಾಗೆ ಕರ್ನಾಟಕ ಸರ್ಕಾರ ನಿಷೇಧ ಹೇರಿದೆ. ರಾಜ್ಯ ಸರ್ಕಾರವು ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಚಿತ್ರ ಬಿಡುಗಡೆ ಮಾಡದಂತೆ ಮನವಿಗಳನ್ನು ಬಂದಿವೆ. ಈ ಹಿನ್ನೆಲೆಯಲ್ಲಿ "ಹಮಾರೆ ಬಾರಾ" ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕದಲ್ಲಿ ಚಿತ್ರದ ಬಿಡುಗಡೆಗೆ ಸರ್ಕಾರ ನಿಷೇಧ ಹೇರಿದೆ. ಕಮಲ್ ಚಂದ್ರಾ ನಿರ್ದೇಶನ ಮಾಡಿ ಅನ್ನು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಮಾರೆ ಬಾರಾ’ ಮುಸ್ಲಿಂ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಮೌಲಾ ಒಬ್ಬ, ಮಹಿಳೆಯರು ಕೇವಲ ಪುರುಷರ ಭೋಗ ವಸ್ತುಗಳು, ಅವರಿಗೆ ಸ್ವಾತಂತ್ರ್ಯ ನೀಡುವಂತಿಲ್ಲ ಎಂಬಿತ್ಯಾದಿ ಭಾಷಣ ಮಾಡುತ್ತಿರುವ ದಶ್ಯದಿಂದ ಪ್ರಾರಂಭವಾಗುವ ಟೀಸರ್, ಮುಸ್ಲಿಂ ಮಹಿಳೆಯರ ಮೇಲೆ ಅವರ ಪತಿ ನಡೆಸುತ್ತಿರುವ ದೌರ್ಜನ್ಯದ ದೃಶ್ಯಗಳನ್ನು ಕಟ್ಟಿಕೊಡಲಾಗಿದೆ.

Author Image

Advertisement