ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಮೂರು ಮಂದಿ ನನ್ನ ತೇಜೋವಧೆ ನಡೆಸುತ್ತಿದ್ದಾರೆ'- ಸಿಎಂ ಸಿದ್ದರಾಮಯ್ಯ

10:19 AM Jul 19, 2024 IST | Bcsuddi
Advertisement

ಬೆಂಗಳೂರು: ಮೂರು ಮಂದಿ ರಾಜಕೀಯ ನಾಯಕರು ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹೆಚ್ ಡಿಕೆ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಹಾಗೂ ಸಂತೋಷ ಅವರು ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Advertisement

ಗುರುವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಮ್ಮ ಕುಟುಂಬದಿಂದ ಯಾವುದೇ ಅಕ್ರಮ ನಡೆದಿಲ್ಲ. ಕಾನೂನು ವ್ಯಾಪ್ತಿ ಮೀರಿ ನಾವು ಎಲ್ಲೂ ಏನನ್ನೂ ಮಾಡಿಲ್ಲ. ವಾಲ್ಮೀಕಿ ನಿಗಮ ಪ್ರಕರಣದಲ್ಲೂ ಸರ್ಕಾರದಿಂದ ಯಾವುದೇ ತಪ್ಪು ನಡೆದಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಸರ್ಕಾರಕ್ಕೆ ಹಾನಿ ಮಾಡಲು ಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಶಾಸಕರಿಗೆ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.

ಇನ್ನು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಮತ್ತು ಸಚಿವರು ವಿಧಾನಸಭೆ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸದನದಲ್ಲಿ ನಾವು ಒಗ್ಗಟ್ಟಾಗಿ ಹೋರಾಡಬೇಕು. ಇಷ್ಟು ದಿನ ರಕ್ಷಣಾತ್ಮಕವಾಗಿ ನಡೆದುಕೊಂಡಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ವರ್ತಿಸಬೇಕಿದೆ ಎಂದರು.

ಇಷ್ಟರವರೆಗೆ ಬಿಜೆಪಿ ಹೇಳಿದ್ದನ್ನು ಕೇಳಿಕೊಂಡು ಕುಳಿತಿದ್ದೇವೆ. ಇನ್ನು ಮುಂದೆ ನೇರ ಬಿಜೆಪಿಗೆ ಟಕ್ಕರ್ ನೀಡಬೇಕು. ಬಿಜೆಪಿಯವರು ಹೇಳಿದ್ದನ್ನು ಕೇಳಿಕೊಂಡು ಬರುವುದಕ್ಕೆ ನಾವು ಸದನಕ್ಕೆ ಹೋಗುವುದಲ್ಲ. ಕಲಾಪದಲ್ಲಿ ಬಿಜೆಪಿಯ ಲೋಪಗಳನ್ನು ಎತ್ತಿ ಹಿಡಿದು ತೋರಿಸಬೇಕು ಎಂದು ತಿಳಿಸಿದರು.

 

Advertisement
Next Article