ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ'- ಮಮತಾ ಬ್ಯಾನರ್ಜಿ ತಿರುಗೇಟು

04:30 PM Sep 09, 2024 IST | BC Suddi
Advertisement

ಕೋಲ್ಕತ್ತಾ :ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರವಾಗಿ, ಹತ್ಯೆಯಾದ ತರಬೇತಿ ವೈದ್ಯೆಯ ಪೋಷಕರಿಗೆ ಕೋಲ್ಕತ್ತಾ ಪೊಲೀಸರು ಲಂಚ ನೀಡಿದ್ದರು ಎಂಬ ಆರೋಪವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಳ್ಳಿಹಾಕಿದ್ದಾರೆ‌. ಆ ರೀತಿಯ ಘಟನೆಯೇ ನಡೆದಿಲ್ಲ. ಇದು ಸರ್ಕಾರದ ವಿರುದ್ಧ ಆರೋಪ ಎಂದು ಪ್ರತಿಪಾದಿಸಿದ್ದಾರೆ.

Advertisement

ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ನಮಗೆ ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣವನ್ನು ನೀಡಿದರು.ಅದನ್ನು ನಾವು ತಕ್ಷಣ ನಿರಾಕರಿಸಿದ್ದೇವೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದರು.

ಇದಕ್ಕೆ ಪ್ರತ್ಯ್ತುರ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಮೃತ ವೈದ್ಯೆಯ ಕುಟುಂಬಕ್ಕೆ ನಾನು ಯಾವತ್ತೂ ಹಣ ನೀಡಿಲ್ಲ. ಇದು ಅಪಪ್ರಚಾರವಲ್ಲದೆ ಬೇರೇನೂ ಅಲ್ಲ. ಹಣವು ಎಂದಿಗೂ ಜೀವನವನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ನಾನು ಪೋಷಕರಿಗೆ ಈ ಹಿಂದೆ ಹೇಳಿದ್ದೆ ಎಂದು ಹೇಳಿದ್ದಾರೆ.

ಪ್ರತಿಭಟನೆಯ ನಂತರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಲು ಮುಂದಾದರು. ಆದರೆ ದುರ್ಗಾ ಪೂಜೆಗೆ ಮುಂಚಿತವಾಗಿ ಕಾನೂನು ಮತ್ತು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ರಾಜೀನಾಮೆ ಅಂಗೀಕಾರಕ್ಕೆ ನಿರಾಕರಿಸಿದೆ.

ಆ.9 ರಂದು ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮತ್ತು ಕೊಲೆ ಮಾಡಲಾಯಿತು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article